
ಹರೀಶ್ ಕೆ.ಆದೂರ್ ಅವರು 2009ರ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮೇ 26, 2009ರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ಮಳೆ ಬಿದ್ದ ಮೇಲೆ ಹೊರಜಗತ್ತಿಗಿವರು ಅಜ್ಞಾತ ವರದಿಗೆ ಪ್ರಶಸ್ತಿ ಲಭಿಸಿದೆ.ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 21 ಆದಿತ್ಯವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ .ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಜಯರಾಮರಾಜೆ ಅರಸ್(ಭಾ.ಆ.ಸೇ) ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಮೊತ್ತ ರೂ.5001/- , ಪ್ರಶಸ್ತಿ ಪತ್ರ, ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್,ಟಿ,ಬಾಳೇಪುಣಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹರೀಶ್ ಕೆ.ಆದೂರು ಕಳೆದ 13ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಪತ್ರಿಕೆಗಳಿಗೆ ಹವ್ಯಾಸಿ ಬರಹಗಾರರಾಗಿದ್ದ ಹರೀಶ್ ತಮ್ಮ ದೈನಿಕ ಪತ್ರಿಕಾ ವೃತ್ತಿಯನ್ನು ಹೊಸದಿಗಂತ ಕನ್ನಡ ದೈನಿಕದಿಂದ ಪ್ರಾರಂಭಿಸಿದರು.
ನಂತರ ಉಷಾಕಿರಣ, ಸಂಯುಕ್ತ ಕರ್ನಾಟಕ, ವಾರಪತ್ರಿಕೆಗಳಾದ ಜೈಕನ್ನಡಮ್ಮ , ಲೋಕಾಯುಕ್ತ ದರ್ಶನಗಳಲ್ಲಿ ಸೇವೆಸಲ್ಲಿಸಿದ್ದಾರೆ. ಪ್ರಸ್ತುತ ಮೂಡಬಿದಿರೆಯ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಪ್ರವರ್ತಿತ ಆಳ್ವಾಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕ. ಜೊತೆಗೆ ಈ ಕನಸು.ಕಾಂ ಎಂಬ ಮಂಗಳೂರಿನ ಮೊದಲ ಕನ್ನಡ ಅಂತರ್ಜಾಲ ಪತ್ರಿಕೆಯ ಸಂಪಾದಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
1 comment:
ಮಂಗಳೂರು,ಮಾ.21: 2009 ರ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನು ಪತ್ರಕರ್ತ, ಪತ್ರಿಕೋದ್ಯಮ ಉಪನ್ಯಾಸಕ ಹರೀಶ್ ಕೆ.ಆದೂರು ಅವರಿಗೆ ರವಿವಾರ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪ್ರದಾನಿಸಿ ಗೌರವಿಸಲಾಯಿತು.
ಮೇ 26, 2009ರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಮಳೆ ಬಿದ್ದ ಮೇಲೆ ಹೊರಜಗತ್ತಿಗಿವರು ಅಜ್ಞಾತ' ವರದಿಗೆ ಪ್ರಶಸ್ತಿ ಲಭಿಸಿತ್ತು. ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಜಯರಾಮರಾಜೆ ಅರಸ್(ಭಾ.ಆ.ಸೇ) ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದರು.
Post a Comment